Tuesday, October 20, 2009

ಬೆಳಗಾವಿಯಲ್ಲಿ ಎಂ.ಇ.ಎಸ್ ನಿಂದ ಮಹಾಮೇಳಾವ - ಕರವೇ ವಿರೋಧ

ಕೆಲವು ವಾರಗಳ ಹಿಂದೆ ಸುರಿದ ಭಾರಿ ಮಳೆಯ ಪರಿಣಾಮ ಉತ್ತರ ಕರ್ನಾಟಕ ಪ್ರವಾಹದಿಂದ ತತ್ತರಿಸಿಹೋಗಿದೆ. ಈ ಕಾರಣಕ್ಕಾಗಿಯೇ ಕರ್ನಾಟಕ ಜನತೆ ನಾಡಹಬ್ಬವಾದ ಕರ್ನಾಟಕ ರಾಜ್ಯೋತ್ಸವವನ್ನು ಸಹ ಸರಳವಾಗಿ ಆಚರಿಸಲು ನಿರ್ಧರಿಸಿಕೊಂಡಿದ್ದಾರೆ. ಆದರೆ ಪ್ರವಾಹದಿಂದ ತತ್ತರಿಸಿರುವ ಜಿಲ್ಲೆಗಳಲ್ಲಿ ಒಂದಾದ ಬೆಳಗಾವಿಯಲ್ಲಿ ಮಹಾರಾಷ್ಟ್ರ ಏಕೀಕರಣ ಸಮಿತಿ ಮತ್ತೆ ಗಡಿ ಹಾಗೂ ಭಾಷೆ ವಿವಾದವನ್ನು ಕೆದಕುತ್ತಿದೆ.

ಬೆಳಗಾವಿ ಕರ್ನಾಟಕದ ಅವಿಭಾಜ್ಯ ಅಂಗವೆಂದು ಗೊತ್ತಿದ್ದರೂ ಸಹ ಎಂ.ಇ.ಎಸ್ ಪದೇ ಪದೇ ಮರಾಠಿ ಮತ್ತು ಕನ್ನಡ ಭಾಷಿಕರ ನಡುವೆ ಭಾಷೆಯ ನೆವದಲ್ಲಿ ವೈಮನಸ್ಯವನ್ನು ಉಂಟುಮಾಡಲು ಪ್ರಯತ್ನಿಸುತ್ತಿದೆ. ನಾಡಿನ ಏಕತೆಗೆ ಮಾರಕವಾಗು ಕೆಲಸದಲ್ಲಿ ಭಾಗಿಯಾಗಿರುವ ಇಂತಹ ಸಂಘಟನೆಯನ್ನು ಕರ್ನಾಟಕ ರಕ್ಷಣಾ ವೇದಿಕೆ ತೀವ್ರವಾಗಿ ವಿರೋಧಿಸುತ್ತದೆ.