ಉತ್ತರ ಕರ್ನಾಟಕದ ನೆರೆ ಪೀಡಿತರ ಸಂಕಷ್ಟಗಳಿಗೆ ಕ.ರ.ವೇ. ಇಂದ ಸ್ಪಂದನೆ
ಕರ್ನಾಟಕದ ಇತಿಹಾಸದಲ್ಲಿ ಒಂದು ಕರಾಳ ಅಧ್ಯಾಯವನ್ನು ತೆರೆದ ಮಳೆಯಿಂದಾಗಿ ಅಕ್ಷರಶಃ ಕರ್ನಾಟಕದ ಅರ್ಧಭಾಗ ನೀರಿನಲ್ಲಿ ಮುಳುಗಡೆಯಾಗಿ ಕರ್ನಾಟಕದ ಜನತೆ ತಮ್ಮ ಮನೆಗಳನ್ನು ಕಳೆದುಕೊಂಡು ಬೀದಿ ಪಾಲಾಗಿದ್ದಾರೆ, ಇದರ ಜೊತೆಗೆ ಜಾನುವಾರುಗಳು, ಲಕ್ಷಾಂತರ ಎಕರೆಯ ಬೆಳೆ ನಾಶವಾಗಿಹೋಗಿವೆ ಹಾಗು ಕೋಟ್ಯಾಂತರ ರೂಪಾಯಿಗಳ ಆಸ್ತಿ ಪಾಸ್ತಿ ಹಾನಿಯಾಗಿ ಕರ್ನಾಟಕದ ಅಭಿವೃದ್ಧಿಗೆ ಹಿನ್ನೆಡೆಯಾಗಿದೆ.
ಇಂತಹ ಸಂಕಷ್ಟದ ಸಮಯದಲ್ಲಿ ಉತ್ತರ ಕರ್ನಾಟಕದ ನೆರೆ ಪೀಡಿತ ಪ್ರದೇಶಗಳಿಗೆ ಭೇಟಿ ನೀಡುತ್ತಿರುವ ನಮ್ಮ ರಾಜ್ಯಾಧ್ಯಕ್ಷರು ನೆರೆ ಪೀಡಿತರ ಕಷ್ಟಗಳಿಗೆ ಸ್ಪಂದಿಸುತ್ತಿದ್ದಾರೆ.
ಇದರ ಪತ್ರಿಕಾ ಹೇಳಿಕೆಯನ್ನು ಇಲ್ಲಿ ನೋಡಿ.