ನಾಮಫಲಕದಲ್ಲಿ ಕನ್ನಡದ ಕಡ್ಡಾಯ ಬಳಕೆಗೆ ಆಗ್ರಹಿಸಿ ಪ್ರತಿಭಟನೆ
ಬೆಂಗಳೂರಿನಲ್ಲಿ ನಡೆಯಲಿರುವ ೭೭ ನೇ ಕನ್ನಡ ಸಾಹಿತ್ಯ ಸಮ್ಮೇಳನದ ದಿನಾಂಕ ಸಮೀಪಿಸುತ್ತಿದೆ. ಇಂತಹ ಮಹತ್ವದ ಸಂದರ್ಭದಲ್ಲಾದರೂ ಬೆಂಗಳೂರನ್ನೂ ಒಳಗೊಂಡು, ರಾಜ್ಯದಲ್ಲಿರುವ ಎಲ್ಲ ಸಾರ್ವಜನಿಕ ನಾಮಫಲಕಗಳು ಮತ್ತು ಜಾಹಿರಾತುಗಳಲ್ಲಿ ಕನ್ನಡದ ಕಡ್ಡಾಯ ಬಳಕೆಯ ನಿಯಮವನ್ನು ಅನುಷ್ಠಾನಗೊಳಿಸಿ, ಕನ್ನಡದ ವಾತಾವರಣ ನಿರ್ಮಿಸಬೇಕಾದುದು ಸರ್ಕಾರದ ಕರ್ತವ್ಯ ಹಾಗೂ ಜವಾಬ್ದಾರಿ ಕೂಡ. ಆದರೆ ನಾಮಫಲಕಗಳಲ್ಲಿ ಕನ್ನಡದ ಬಳಕೆಯ ನಿಯಮವನ್ನೂ ನಿರಂತರವಾಗಿ ಮೀರಲಾಗುತಿದ್ದರೂ ನಮ್ಮ ಸರ್ಕಾರ ಮಾತ್ರ ನಿಯಮ ಮೀರಿದವರ ವಿರುದ್ಧ ಯಾವ ಕ್ರಮವನ್ನೂ ಕೈಗೊಳ್ಳದೇ ಕೈಕಟ್ಟಿ ಕುಳಿತಿದೆ.
ನಾಮಫಲಕಗಳಲ್ಲಿ ಕನ್ನಡದ ಕಡ್ಡಾಯ ಬಳಕೆಯನ್ನು ಎಲ್ಲ ನಿಯಮಾವಳಿಗಳ ಪ್ರಕಾರ ಅನುಷ್ಠಾನಗೊಳಿಸಬೇಕೆಂದು ಆಗ್ರಹಿಸಿ ನಮ್ಮ ವೇದಿಕೆ ನಿರಂತರವಾಗಿ ಹೋರಾಟ ನಡೆಸುತ್ತಾ ಬಂದಿರುವುದು ತಮಗೆಲ್ಲಾ ತಿಳಿದಿದೆ. ಇದೇ ವಿಷಯವಾಗಿ ಜನವರಿ ೩೧ ರಂದು ಬೆಂಗಳೂರಿನಲ್ಲಿ ನಮ್ಮ ವೇದಿಕೆಯ ಕಾರ್ಯಕರ್ತರು ಪ್ರತಿಭಟನೆ ನಡೆಸಿದರು. ಇದರ ಪತ್ರಿಕಾ ವರದಿಯನ್ನು ಇಲ್ಲಿ ನೋಡಿ: