Monday, September 26, 2011

ಬೆಂಗಳೂರಿನ ವಿಧಾನಸಭಾ ಕ್ಷೇತ್ರಗಳ ವಾರ್ಡ್ ಮತ್ತು ಬೂತ್ ಮಟ್ಟದ ಕರವೇ ಕಾರ್ಯಕರ್ತರ ಸಭೆ

ಕರ್ನಾಟಕ ರಕ್ಷಣಾ ವೇದಿಕೆಯ ಲಕ್ಷಾಂತರ ಕಾರ್ಯಕರ್ತರು ನಾಡಿನ ಏಳಿಗೆಗಾಗಿ ಹಗಲಿರುಳು ದುಡಿಯುತ್ತಿದ್ದು, ಕನ್ನಡ-ಕನ್ನಡಿಗ-ಕರ್ನಾಟಕಕ್ಕೆ ಯಾವುದೇ ರೀತಿಯ ಅನ್ಯಾಯವಾದರೂ ಅದರ ವಿರುದ್ದ ಪ್ರತಿಭಟಿಸುತ್ತಿರುವುದು ತಮಗೆಲ್ಲ ತಿಳಿದ ವಿಚಾರವೇ. ಬೆಂಗಳೂರನ್ನೂ ಒಳಗೊಂಡು ಕರ್ನಾಟಕದಾದ್ಯಂತ ಅನಿಯಂತ್ರಿತ ವಲಸೆ ದಿನೇ ದಿನೇ ಹೆಚ್ಚುತ್ತಿದ್ದು, ಕನ್ನಡೇತರರು ವಸತಿ, ಉದ್ಯೋಗ ಮುಂತಾದ ವಿಷಯಗಳಲ್ಲಿ ಸ್ಥಳೀಯರ ಮೇಲೆ ಸವಾರಿ ಮಾಡುವ ಪರಿಸ್ಥಿತಿ ಹೆಚ್ಚುತ್ತಿದೆ.

ಇಷ್ಟೇ ಅಲ್ಲದೆ, ಇಲ್ಲಿನ ರಾಜಕೀಯ ವ್ಯವಸ್ಥೆ, ಸಾರ್ಜಜನಿಕ ಆಡಳಿತ ವ್ಯವಸ್ಥೆ, ಗ್ರಾಹಕ ಸೇವೆ ಮುಂತಾದುವು ಈ ನಾಡಿ ಕನ್ನಡಿಗರಿಗಿಂತ ಪರಭಾಷಿಕರಿಗೇ ಅನುಕೂಲವಾಗುವ ರೀತಿಯಲ್ಲಿ ಕಟ್ಟಲಾಗುತ್ತಿದೆ. ಕನ್ನಡಿಗರು ತಮ್ಮ ನಾಡಿನಲ್ಲಿಯೇ ಪರಕೀಯರಾಗಿ ಬಾಳುವಂತ, ಉಸಿರುಗಟ್ಟಿಸುವ ಸ್ಥಿತಿ ನಿರ್ಮಾಣ ಮಾಡಲಾಗುತ್ತಿದ್ದು, ಇದನ್ನೆಲ್ಲಾ ಕಂಡರೂ ಕಾಣದ ಹಾಗೆ ಜಾಣ ಕುರುಡು, ಜಾಣ ಕಿವುಡನ್ನು ಸರ್ಕಾರ ಮತ್ತು ಸರ್ಕಾರಿ ಪ್ರತಿನಿಧಿಗಳು ಪ್ರದರ್ಶಿಸುತ್ತಿದ್ದಾರೆ.

ಕನ್ನಡಿಗರ ರಕ್ಷಣೆ ಮತ್ತು ಏಳಿಗೆಗೆ ಬೇಕಾದ ವ್ಯವಸ್ಥೆಗಳನ್ನು ಕಟ್ಟಲು ಬೇಕಾದ ರಾಜಕೀಯ ಇಚ್ಛಾಶಕ್ತಿಯನ್ನು ಇಂದಿನ ಯಾವ ರಾಜಕೀಯ ಪಕ್ಷಗಳು ತೋರುತ್ತಿಲ್ಲ. ಇಂತಹ ಪರಿಸ್ಥಿತಿಯಲ್ಲಿ, ಇದೆಲ್ಲದರ ಬಗ್ಗೆ ಜಾಗೃತಿ ಮೂಡಿಸಿ, ಕನ್ನಡೇತರರನ್ನು ಮುಖ್ಯವಾಹಿನಿಗೆ ಕರೆತರಲು, ಮತ್ತು ಕನ್ನಡಿಗರ ಒಗ್ಗಟ್ಟು ಮತ್ತು ರಾಜಕೀಯ ಇಚ್ಛಾಶಕ್ತಿ ಹೆಚ್ಚಿಸಲು ಕರ್ನಾಟಕ ರಕ್ಷಣಾ ವೇದಿಕೆಯು ಬೆಂಗಳೂರಿನ ವಿಧಾನ ಸಭಾ ಕ್ಷೇತ್ರಗಳಲ್ಲಿ ಸಭೆಗಳನ್ನು ನಡೆಸುತ್ತಿದ್ದು, ವಿವಿಧ ಕ್ಷೇತ್ರ, ವಾರ್ಡ್ ಹಾಗೂ ಬೂತ್ ಮಟ್ಟದ ಪದಾಧಿಕಾರಿಗಳ ನೇಮಕಾತಿ ಪ್ರಕ್ರಿಯೆ ಆರಂಭಿಸಿದೆ.

ಬೆಂಗಳೂರಿನಲ್ಲಿ ಈ ಕೆಳಗಿನ ವಿಧಾನಸಭಾ ಕ್ಷೇತ್ರಗಳಲ್ಲಿ ಸಭೆಗಳು ನಡೆದವು.

ಬೆಂಗಳೂರು ದಕ್ಷಿಣ ವಿಧಾನಸಭಾ ಕ್ಷೇತ್ರ
ಬಿ.ಟಿ.ಎಂ. ವಿಧಾನಸಭಾ ಕ್ಷೇತ್ರ
ಗಾಂಧಿನಗರ ವಿಧಾನಸಭಾ ಕ್ಷೇತ್ರ
ಕೆ.ಆರ್. ಪುರ ವಿಧಾನಸಭಾ ಕ್ಷೇತ್ರ
ಮಹಾಲಕ್ಷ್ಮಿಪುರ ವಿಧಾನಸಭಾ ಕ್ಷೇತ್ರ
ಶಿವಾಜಿನಗರ ವಿಧಾನಸಭಾ ಕ್ಷೇತ್ರ
ಯಶವಂತಪುರ ವಿಧಾನಸಭಾ ಕ್ಷೇತ್ರ
ಆನೇಕಲ್ ವಿಧಾನಸಭಾ ಕ್ಷೇತ್ರ
ಪುಲಕೇಶಿನಗರ ವಿಧಾನಸಭಾ ಕ್ಷೇತ್ರ

ವಿಧಾನಸಭಾ ಕ್ಷೇತ್ರಗಳಲ್ಲಿ ನಡೆದ ಕೆಲವು ಸಭೆಗಳ ಚಿತ್ರಗಳನ್ನು ಕೆಳಗೆ ನೋಡಿ:

ಬೆಂಗಳೂರು ದಕ್ಷಿಣ ವಿಧಾನಸಭಾ ಕ್ಷೇತ್ರದ ಸಭೆ
ಬಿ.ಟಿ.ಎಂ. ವಿಧಾನಸಭಾ ಕ್ಷೇತ್ರದ ಸಭೆ

ಗಾಂಧಿನಗರ ವಿಧಾನಸಭಾ ಕ್ಷೇತ್ರದ ಸಭೆಕೆ.ಆರ್. ಪುರ ವಿಧಾನಸಭಾ ಕ್ಷೇತ್ರದ ಸಭೆ

ಮಹಾಲಕ್ಷ್ಮಿಪುರ ವಿಧಾನಸಭಾ ಕ್ಷೇತ್ರದ ಸಭೆಶಿವಾಜಿನಗರ ವಿಧಾನಸಭಾ ಕ್ಷೇತ್ರದ ಸಭೆ


ಯಶವಂತಪುರ ವಿಧಾನಸಭಾ ಕ್ಷೇತ್ರದ ಸಭೆ