ಬೆಳಗಾವಿಯಲ್ಲಿ ರಾಜ್ಯಮಟ್ಟದ ಗಡಿನಾಡ ಕನ್ನಡಿಗರ ಜಾಗೃತಿ ಸಮಾವೇಶ
ಕನ್ನಡ ಚಳವಳಿಗೆ 50 ವರ್ಷ ತುಂಬಿದ ಸಂದರ್ಭದಲ್ಲಿ ೩೦-೧೧-೨೦೧೨ ರಂದು ಕರ್ನಾಟಕ ರಕ್ಷಣಾ ವೇದಿಕೆ ಬೆಳಗಾವಿಯಲ್ಲಿ ರಾಜ್ಯಮಟ್ಟದ "ಗಡಿನಾಡ ಕನ್ನಡಿಗರ ಜಾಗೃತಿ ಸಮಾವೇಶ" ನಡೆಸುತ್ತಿದೆ. ಸಮಾವೇಶದಲ್ಲಿ ಬೃಹತ್ ಮೆರವಣಿಗೆಯನ್ನು ಹಮ್ಮಿಕೊಳ್ಳಲಾಗಿದೆ. ಮೆರವಣಿಗೆ ಚೆನ್ನಮ್ಮ ವೃತ್ತದಿಂದ ಶುರುವಾಗಿ ಸಿಪಿಎಡ್ ಮೈದಾನ ತಲುಪಿತು. ೨೦,೦೦೦ ಹೆಚ್ಚು ರಕ್ಷಣಾ ವೇದಿಕೆ ಕಾರ್ಯಕರ್ತರು ಮತ್ತು ಅಭಿಮಾನಿಗಳು ಈ ಬೃಹತ್ ಮೆರವಣಿಗೆಯಲ್ಲಿ ಪಾಲ್ಗೊಂಡಿದ್ದರು. ಈ ಬೃಹತ್ ಮೆರವಣಿಗೆಯ ಕೆಲವು ಚಿತ್ರಗಳು ಇಲ್ಲಿವೆ


