Friday, May 31, 2013

ಕನ್ನಡ ತಿರಸ್ಕರಿಸಿ ಅನ್ಯಭಾಷೆಯಲ್ಲಿ ಪ್ರಮಾಣ ವಚನ ಸ್ವೀಕರಿಸಿದ ಶಾಸಕರ ಧೋರಣೆ ಖಂಡಿಸಿ ರಾಜ್ಯವ್ಯಾಪಿ ಪ್ರತಿಭಟನೆ

ಕನ್ನಡದಲ್ಲಿ ಪ್ರಮಾಣ ವಚನ ಸ್ವೀಕರಿಸದ ಶಾಸಕರ ಕನ್ನಡ - ಕರ್ನಾಟಕ ವಿರೋಧಿ ಧೋರಣೆಯನ್ನು ಖಂಡಿಸಿ ಕರ್ನಾಟಕ ರಕ್ಷಣಾ ವೇದಿಕೆ ವತಿಯಿಂದ ರಾಜ್ಯಾದ್ಯಂತ ಪ್ರತಿಭಟನೆ ನಡೆಸಿದೆವು. ಶಾಸಕರ ವರ್ತನೆ ವಿರೋಧಿಸಿ ಬೆಂಗಳೂರು, ದಾವಣಗೆರೆ, ಹುಬ್ಬಳ್ಳಿ, ವಿಜಾಪುರ, ಬಾಗಲಕೋಟೆಯ ನಮ್ಮ ಜಿಲ್ಲಾ ಕೇಂದ್ರಗಳಲ್ಲಿ ನಾವು ನಡೆಸಿದ ಹೋರಾಟದ ಪತ್ರಿಕಾ ವರದಿನ್ನು ಇಲ್ಲಿ ಓದಿ:

ಕನ್ನಡಪ್ರಭ ವರದಿ:
ವಿಜಯವಾಣಿ ವರದಿ:
 


Wednesday, May 29, 2013

ಹೋಂಡಾ ಸಂಸ್ಥೆ ಉದ್ಯೋಗ ನೇಮಕಾತಿಯಲ್ಲಿ ಕನ್ನಡಿಗರಿಗೆ ಆದ್ಯತೆ ನೀಡಲು ಆಗ್ರಹ

ಕೋಲಾರ ಹೊರವಲಯ ಕೈಗಾರಿಕಾ ಪ್ರದೇಶದಲ್ಲಿ ಸ್ಥಾಪಿಸಲಿರುವ ಹೋಂಡಾ ಕಂಪನಿಯ ಉದ್ಯೋಗ ನೇಮಕಾತಿಯಲ್ಲಿ ಕನ್ನಡಿಗರಿಗೆ ಆದ್ಯತೆ ನೀಡಬೇಕೆಂದು ಇಂದು (ಮೇ ೨೯, ೨೦೧೩) ಸಂಸ್ಥೆಯ ಆಡಳಿತ ಮಂಡಳಿಯನ್ನು ಆಗ್ರಹಿಸಿದೆವು.

ಹಾಗೆಯೇ, ನೇಮಕಾತಿಯಲ್ಲಿ ಸ್ಥಳೀಯರಿಗೆ ಆದ್ಯತೆ ನೀಡದಿದ್ದಲ್ಲಿ ಸರ್ಕಾರ ಕಾರ್ಖಾನೆಗೆ ನೀಡಿರುವ ಭೂಮಿಯನ್ನು ವಾಪಸ್ಸು ಪಡೆದುಕೊಳ್ಳಬೇಕು ಎಂದು ನಮ್ಮ ವೇದಿಕೆಯ ರಾಜ್ಯಾಧ್ಯಕ್ಷರಾದ ಟಿ.ಎ. ನಾರಾಯಣಗೌಡರು ಮುಖ್ಯಮಂತ್ರಿಯವರನ್ನು ಆಗ್ರಹಿಸಿದರು.

ನಮ್ಮ ಆಗ್ರಹದ ಬಗ್ಗೆ ಪತ್ರಿಕಾ ವರದಿಗಳನ್ನು ಇಲ್ಲಿ ನೋಡಿ:

ಸಂಜೆವಾಣಿ ವರದಿ:


ಈ ಸಂಜೆ ವರದಿ:

Sunday, May 19, 2013

ನೂತನ ಮುಖ್ಯಮಂತ್ರಿ ಶ್ರೀ ಸಿದ್ದರಾಮಯ್ಯನವರನ್ನು ಕರವೇ ನಿಯೋಗದಿಂದ ಅಭಿನಂದಿಸಿದ್ದರ ಬಗ್ಗೆ ಪತ್ರಿಕಾ ವರದಿ

ರಾಜ್ಯಕ್ಕೆ ಹೊಸದಾಗಿ ಆಯ್ಕೆಯಾಗಿರುವ ಮುಖ್ಯಮಂತ್ರಿಗಳಾದ ಶ್ರೀ ಸಿದ್ದರಾಮಯ್ಯನವರನ್ನು ಕರ್ನಾಟಕ ರಕ್ಷಣಾ ವೇದಿಕೆ ರಾಜ್ಯಾಧ್ಯಕ್ಷರಾದ ಟಿ.ಎ.ನಾರಾಯಣಗೌಡರ ನೇತೃತ್ವದಲ್ಲಿ ಕರವೇ ಪದಾಧಿಕಾರಿಗಳ ನಿಯೋಗದಿಂದ ಭೇಟಿ ಮಾಡಿ ಅಭಿನಂದಿಸಿದ ಬಗ್ಗೆ ಪತ್ರಿಕಾವರದಿಗಳನ್ನು ಕೆಳಗೆ ನೋಡಿ:

ಕನ್ನಡಪ್ರಭ ವರದಿ:ಉದಯವಾಣಿ ವರದಿ:


Saturday, May 18, 2013

ಕನ್ನಡ-ಕನ್ನಡಿಗ-ಕರ್ನಾಟಕದ ಸಮಗ್ರ ಅಭಿವೃದ್ಧಿಗಾಗಿ ಹೊಸ ಸರ್ಕಾರಕ್ಕೆ ಮನವಿ

ಕರ್ನಾಟಕ ರಕ್ಷಣಾ ವೇದಿಕೆ ರಾಜ್ಯಾಧ್ಯಕ್ಷರಾದ ಟಿ.ಎ.ನಾರಾಯಣಗೌಡರ ನೇತೃತ್ವದಲ್ಲಿ ಕರವೇ ಪದಾಧಿಕಾರಿಗಳ ನಿಯೋಗದಿಂದ ರಾಜ್ಯಕ್ಕೆ ಹೊಸದಾಗಿ ಆಯ್ಕೆಯಾಗಿರುವ ಮುಖ್ಯಮಂತ್ರಿಗಳಾದ ಶ್ರೀ ಸಿದ್ದರಾಮಯ್ಯನವರನ್ನು ಭೇಟಿ ಮಾಡಿ ಅಭಿನಂದಿಸಿದೆವು. ಕನ್ನಡ-ಕನ್ನಡಿಗ-ಕರ್ನಾಟಕದ ಸಮಗ್ರ ಅಭಿವೃದ್ಧಿಗೆ ಹೊಸ ಸರ್ಕಾರ ಕ್ರಮಗಳನ್ನು ಕೈಗೊಳ್ಳಬೇಕೆಂದು ಈ ಮೂಲಕ ಮನವಿ ಮಾಡಿಕೊಂಡಿದ್ದೇವೆ.


 ಮುಖ್ಯಮಂತ್ರಿಗಳಿಗೆ ಸಲ್ಲಿಸುರುವ ಮನವಿ ಪತ್ರವನ್ನು ಈ ಕೆಳಗೆ ಲಗತ್ತಿಸಲಾಗಿದೆ.