Thursday, September 25, 2014

ಮಹಾತ್ಮ ಗಾಂಧಿ ಗ್ರಾಮೀಣ ಉದ್ಯೋಗ ಖಾತ್ರಿ ಯೋಜನೆಯಡಿ 2013-2014 ರ ಸಾಲಿನಲ್ಲಿ ಮಾಡಿದ ಕೆಲಸಕ್ಕೆ ದಕ್ಕಬೇಕಾದ ಹಣದ ವಿಷಯವಾಗಿ ಪ್ರತಿಭಟನೆ

ಯಾದಗಿರಿ ತಾಲ್ಲೂಕಿನಲ್ಲಿ ಬರುವ 11 ಗ್ರಾಮ ಪಂಚಾಯಿತಿಗಳಲ್ಲಿ ಮಹಾತ್ಮ ಗಾಂಧಿ ಗ್ರಾಮೀಣ ಉದ್ಯೋಗ ಖಾತ್ರಿ ಯೋಜನೆಯಡಿ 2013-2014 ರ ಸಾಲಿನಲ್ಲಿ ಮಾಡಿದ ಕೆಲಸಕ್ಕೆ ಕೊಡಬೇಕಾದ ಹಣವನ್ನು ಇನ್ನೂ ಪಾವತಿಸದ ವಿಷಯವಾಗಿ ಜಿಲ್ಲಾ ಪಂಚಾಯಿತಿ ಕಚೇರಿಯ ಮುಂದೆ ಪ್ರತಿಭಟಿಸಿ ಕೂಡಲೇ ಹಣ ಬಿಡುಗಡೆ ಮಾಡುವಂತೆ ಕರವೇ ಕಾರ್ಯಕರ್ತರು ಒತ್ತಾಯಿಸಿದರು.